Saturday, June 27, 2026
Homeತಾಜಾ ಸುದ್ದಿಸ್ಟಾರ್ ಜೋಡಿಗಳ ನಾಲ್ಕು ವರ್ಷದ ದಾಂಪತ್ಯ ಅಂತ್ಯ : ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ...

ಸ್ಟಾರ್ ಜೋಡಿಗಳ ನಾಲ್ಕು ವರ್ಷದ ದಾಂಪತ್ಯ ಅಂತ್ಯ : ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ಸಮಂತಾ

- Advertisement -
- Advertisement -

ಟಾಲಿವುಡ್ : ಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆಯುತ್ತಿರುವುದು ಖಚಿತವಾಗಿದೆ. ಇಂದು ಇನ್‍ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಸಮಂತಾ, ಪತಿ ನಾಗಚೈತನ್ಯ ಅವರಿಂದ ದೂರ ಆಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ.


ಈ ಬಗ್ಗೆ ಟ್ವಿಟರ್ ನಲ್ಲಿ ಮಾತನಾಡಿದ ನಾಗ ಚೈತನ್ಯ, ಸಾಕಷ್ಟು ಚರ್ಚೆ ಮತ್ತು ಆಲೋಚನೆಯ ನಂತರ, ಸ್ಯಾಮ್ ಮತ್ತು ನಾನು ನಮ್ಮ ಸ್ವಂತ ಮಾರ್ಗಗಳನ್ನು ಅನುಸರಿಸಲು ಗಂಡ ಮತ್ತು ಹೆಂಡತಿಯಾಗಿ ಬೇರ್ಪಡಲು ನಿರ್ಧರಿಸಿದ್ದೇವೆ. ನಮ್ಮ ಸಂಬಂಧದ ತಿರುಳಾಗಿರುವ ಒಂದು ದಶಕದ ಸ್ನೇಹವನ್ನು ಹೊಂದಿರುವುದು ನಮ್ಮ ಅದೃಷ್ಟ, ಅದು ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧವನ್ನು ಹೊಂದಿರುತ್ತದೆ ಎಂದು ನಾವು ನಂಬುತ್ತೇವೆ ಎಂದು ತಿಳಿಸಿದ್ದಾರೆ.

ಅಂದಹಾಗೇ 2017ರಲ್ಲಿ ನಟ ನಾಗ ಚೈತನ್ಯ ಹಾಗೂ ಸಮಂತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂತ ಸ್ಟಾರ್ ನಟ ನಾಗ ಚೈತನ್ಯ ಹಾಗೂ ಸಮಂತಾ ಇದೀಗ ವಿವಾಹ ವಿಚ್ಛೇದನಗೊಂಡಿದ್ದಾರೆ.

- Advertisement -

Latest News

error: Content is protected !!