Saturday, June 6, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

ಚಾರ್ಮಾಡಿ ಘಾಟ್ ನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

- Advertisement -
- Advertisement -

ಕೊಟ್ಟಿಗೆಹಾರ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.

ಶಿಕಾರಿ ಮಾಡುವವರ ಗುಂಡಿಗೆ ಕಡವೆ ಓಡಿಬಂದು ರಸ್ತೆಯ ಬದಿಯಲ್ಲಿ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ.

ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!