Sunday, June 7, 2026
Homeಕರಾವಳಿಬೆಳ್ತಂಗಡಿಯಲ್ಲಿ ಜ್ವರದಿಂದಾಗಿ ಒಂದೇ ಕುಟುಂಬದ ಎರಡು ಕಂದಮ್ಮಗಳು ಸಾವು

ಬೆಳ್ತಂಗಡಿಯಲ್ಲಿ ಜ್ವರದಿಂದಾಗಿ ಒಂದೇ ಕುಟುಂಬದ ಎರಡು ಕಂದಮ್ಮಗಳು ಸಾವು

- Advertisement -
- Advertisement -

ಬೆಳ್ತಂಗಡಿ; ಒಂದೇ ಕುಟುಂಬದ ಎರಡು ಪುಟ್ಟ ಕಂದಮ್ಮಗಳು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮದ್ದಡ್ಕಗ್ರಾಮದ ಲಾಡಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4) ಮೃತ ಮಕ್ಕಳು. ಮಕ್ಕಳಿಗೆ ಆರಂಭದಲ್ಲಿ ಜ್ವರ ಕಾಣಿಸಿಕೊಂಡಿತ್ತು ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಬಾಲಕ ನಿನ್ನೆ ಮೃತ ಪಟ್ಟಿದ್ದು ಇನ್ನೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ. ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!