Friday, June 5, 2026
Homeಕರಾವಳಿಸುಳ್ಯ; ಸಂಪಾಜೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ...

ಸುಳ್ಯ; ಸಂಪಾಜೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ಸಾವು

- Advertisement -
- Advertisement -

ಸುಳ್ಯ; ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ  ನಡೆದಿದೆ.

ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು ಗಾಯಗೊಂಡ ಪ್ರಯಾಣಿಕರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ‌ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!