Saturday, June 6, 2026
Homeಕರಾವಳಿಸಂಪಾಜೆ: ಶಾಸಕ ಕೆ.ಜಿ.ಬೋಪಯ್ಯರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ: ಶಾಸಕ ಕೆ.ಜಿ.ಬೋಪಯ್ಯರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

- Advertisement -
- Advertisement -

ಸಂಪಾಜೆ: ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯನವರು ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿ ಉದ್ಘಾಟಿಸಿದರು.

ಕೊಯನಾಡು ಶಾಲಾ ನೂತನ ಕಟ್ಟಡ, ಕೊಯನಾಡು ಗುಡ್ಡೆಗದ್ದೆ ಕಾಂಕ್ರೀಟ್ ರಸ್ತೆ, ಕುಂಠಿಕಾನ ಕೂಟೇಲು ಕಾಂಕ್ರೀಟ್ ರಸ್ತೆ, ಬೈಲು ಅಂಗನವಾಡಿಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ, ಗ್ರಾಮ ಪಂಚಾಯತ್ ಸಭಾಭವನ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮವು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್ ವಹಿಸಿದರು.

ಸಮಾರಂಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶ್ರೀ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಅನಂತ ಎನ್.ಸಿ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಂದರ ಬಿಸಿಲುಮನೆ, ಕೃಷಿ ಉತ್ಪನ್ನ ಮಾರುಕಟ್ಟೆ ಯ ಸದಸ್ಯರಾದ ದೇವಪ್ಪ ಕೊಯನಾಡು, ಕೃಷಿ ಉತ್ಪನ್ನ ಮಾರುಕಟ್ಟೆ ಯ ಮಾಜಿ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ, ಸದಸ್ಯರಾದ ಶ್ರೀ ರಮಾದೇವಿ ಬಾಲಚಂದ್ರ ಕಳಗಿ, ಸಂಪಾಜೆ ಪಂಚಾಯತ್ ಚುನಾಯಿತ ಪ್ರತಿನಿಧಿಗಳು, ರೈತ ಹಿತರಕ್ಷಣಾ ವೇದಿಕೆ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿವರ್ಗದವರು, ಆರಕ್ಷಕ ಠಾಣಾ ಸಿಬ್ಬಂದಿಗಳು, ಕೃಷಿ ಪತ್ತಿನ ಸಹಕಾರಿ ಸಂಘದ ಚುನಾಯಿತ ಪ್ರತಿನಿಧಿಗಳು, ಪಂಚಾಯತ್ ಮಾಜಿ ಸದಸ್ಯರುಗಳು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಹಾಗೂ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

- Advertisement -

Latest News

error: Content is protected !!