Monday, May 6, 2024
Homeಅಪರಾಧಸಂಪಾಜೆ ದರೋಡೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ - 71. 52 ಗ್ರಾಂ ಚಿನ್ನಾಭರಣ ವಶ

ಸಂಪಾಜೆ ದರೋಡೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ – 71. 52 ಗ್ರಾಂ ಚಿನ್ನಾಭರಣ ವಶ

spot_img
- Advertisement -
- Advertisement -

ಸುಳ್ಯ: ಸಂಪಾಜೆಯ ಚಟ್ಟೆಕಲ್ಲಿನಲ್ಲಿ ನಡೆದ ಮನೆ ದರೋಡೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೆ ಇಬ್ಬರು ಆರೋಪಿ ಗಳಾದ ತಮಿಳುನಾಡು ಮೂಲದ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿದ್ದಾರೆ.

ಇವರಿಂದ 71. 52 ಗ್ರಾಂ ಚಿನ್ನಾಭರಣಗಳು ಮತ್ತು ನಗದು 11590 ರೂಗಳನ್ನು ಕೃತ್ಯಕ್ಕೆ ಉಪಯೋಗಿಸಿದ ವಾಹನವನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.


ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಾ.20 ರಂದು ರಾತ್ರಿ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಚಟ್ಟೆಕಲ್ಲು ಎಂಬಲ್ಲಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಮನೆಯವರನ್ನು ಆಯುಧ ತೋರಿಸಿ ಬೆದರಿಸಿ, ಸುಮಾರು 1,52,000 – ನಗದು ಮತ್ತು ಸುಮಾರು 83 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ದರೋಡೆ ಮಾಡ ಲಾಗಿತ್ತು.


 ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ಅಧೀಕ್ಷಕ ಸೋನಾವಣೆ ಋಷಿಕೇಶ್ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ನಿರ್ದೇಶನದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಗಾನಾ. ಪಿ.ಕುಮಾರ್ ಮತ್ತು ಸುಳ್ಯಸಿಐ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ನಡೆಸಿತ್ತು.
ಪ್ರಕರಣ ಭೇದಿಸಿದ ಪೊಲೀಸರು ಕೆಲವು ದಿನಗಳ ಹಿಂದೆ ಕಾರ್ತಿಕ್, ಯಧುಕುಮಾರ್, ದೀಕ್ಷಿತ್, ನರಸಿಂಹನ್, ಎಂಬವರುಗಳನ್ನು ಬಂಧಿಸಿ ದರೋಡೆ ಮಾಡಿದ ನಗದು ಹಣದ ಪೈಕಿ 20000 – ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿದ – ವಾಹನ ಮತ್ತು 5 ಮೊಬೈಲ್ ಗಳನ್ನು ಸ್ವಾಧೀನ ಪಡಿಸಿ ಕೊಳ್ಳಲಾಗಿತ್ತು.ಪ್ರಕರಣದಲ್ಲಿ ತನಿಖೆ ಮುಂದು ವರೆಸಿ ಇದೀಗ ಸೆಂಥಿಲ್ ಮತ್ತು ಪಾಂಡಿಸೆಲ್ವಂ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ ಸೆಂಥಿಲ್ ಎಂಬಾತನನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಸೋನಾವಣೆ ಋಷಿಕೇಶ್ ಭಗವಾನ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!