Monday, June 8, 2026
Homeತಾಜಾ ಸುದ್ದಿಇಹಲೋಕ ತ್ಯಜಿಸಿದ ನಟ ಸಂಚಾರಿ ವಿಜಯ್: ಅಪೊಲೋ ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ

ಇಹಲೋಕ ತ್ಯಜಿಸಿದ ನಟ ಸಂಚಾರಿ ವಿಜಯ್: ಅಪೊಲೋ ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ

- Advertisement -
- Advertisement -

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇಂದು ಬೆಳಗ್ಗಿನ ಜಾವ 3.34ಕ್ಕೆ ವೈದ್ಯರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 48 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಸಂಚಾರಿ ವಿಜಯ್​ ಮೃತರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

”ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ಭಾನುವಾರ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದ್ದರು, ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್​ ಕಡೆಯಿಂದ ಪ್ರತಿಕ್ರಿಯೆ ಇರಲಿಲ್ಲ. ಮೆದುಳಿನ ಕೆಲಸಗಳು ನಿಂತು ಹೋಯಿತು. ಇದನ್ನು ಬ್ರೇನ್​ ಡೆಡ್​ ಎನ್ನುತ್ತೇವೆ”ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ವೈದ್ಯರ ಎಲ್ಲ ಪ್ರಯತ್ನಗಳು ವಿಫಲವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಸಂಚಾರಿ ವಿಜಯ್ ಅವರ ಅಂಗಾಂಗಗಳನ್ನು 7 ಮಂದಿಗೆ ಕಸಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!