Monday, June 8, 2026
Homeತಾಜಾ ಸುದ್ದಿಸಂಚಾರಿ ವಿಜಯ್ ಆರೋಗ್ಯದ ಬಗ್ಗೆ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ನಾಳೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ಸಂಚಾರಿ ವಿಜಯ್ ಆರೋಗ್ಯದ ಬಗ್ಗೆ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ನಾಳೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

- Advertisement -
- Advertisement -

ಬೆಂಗಳೂರು : ನಟ ಸಂಚಾರಿ ವಿಜಯ್ ಅವರ ಬ್ರೈನ್ ಡೆಡ್ ಆಗಿದೆ. ಅವರ ಅಂಗಾಂಗ ದಾನ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಇಂತಹ ನಟ ಸಂಚಾರಿ ವಿಜಯ್ ಅವರನ್ನು ನಾಳೆ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ನಾಳೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತಂತೆ ನಟ ಸಂಚಾರಿ ವಿಜಯ್ ಅವರ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದ್ದು, ಜೀವ ಸಾರ್ಥಕ ಪೌಂಢೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಕಾನೂನಾತ್ಮಕ ಪ್ರಕ್ರಿಯೆ ಬೆಳಿಗ್ಗೆಯವರೆಗೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇನ್ನೂ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ನಾಳೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಈ ಬಳಿಕ ಸಂಜೆಯ ಮಧ್ಯಾಹ್ನ ಇಲ್ಲವೇ ಸಂಜೆಯ ವೇಳೆಯಲ್ಲಿ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

- Advertisement -

Latest News

error: Content is protected !!