Sunday, June 7, 2026
Homeತಾಜಾ ಸುದ್ದಿರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

- Advertisement -
- Advertisement -

ಬೆಂಗಳೂರು: ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದರು.

- Advertisement -

Latest News

error: Content is protected !!