Wednesday, June 24, 2026
Homeಚಿಕ್ಕಮಗಳೂರುಮೂಡಿಗೆರೆಯಲ್ಲಿ ಶ್ರೀಗಂಧ ಕಳ್ಳಸಾಗಣೆ ಇಬ್ಬರು ಆರೋಪಿಗಳ ಬಂಧನ

ಮೂಡಿಗೆರೆಯಲ್ಲಿ ಶ್ರೀಗಂಧ ಕಳ್ಳಸಾಗಣೆ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಚಿಕ್ಕಮಗಳೂರು : ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಕ್ರಮ ಶ್ರೀಗಂಧ ಕಳ್ಳಸಾಗಣೆ ಪತ್ತೆಯಾಗಿದೆ. ಅಕ್ಟೋಬರ್ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ಸುಜುಕಿ ಕಂಪನಿಯ ಬೈಕ್ (KA-18-ED-5486) ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀಗಂಧ ಸಾಗಣೆ ಮಾಡುತ್ತಿದ್ದ ಯೂಸುಫ್ ಹಾಗೂ ಸ್ಥಳೀಯ ಪತ್ರಕರ್ತ ಮನ್ಸೂರ್ ಎಂಬುವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.ವಿಶೇಷವೆಂದರೆ ಆ ಬೈಕ್ ಮೇಲೆ “PRESS” ಎಂದು ಬರೆದು ಕಳ್ಳಸಾಗಣೆ ನಡೆಸಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯನ್ನು ಸಹಾಯಕ ಸಂರಕ್ಷಣಾಧಿಕಾರಿ ಆಕರ್ಷ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದ್ದು, ವಲಯ ಅರಣ್ಯಾಧಿಕಾರಿ ಮಂಜುನಾಥ, ಉಪ ವಲಯ ಅರಣ್ಯಾಧಿಕಾರಿಗಳಾದ ಸುಹಾಸ್, ಅಶ್ವಥ್, ಹಾಗೂ ಅರಣ್ಯ ರಕ್ಷಕರಾದ ಉಮೇಶ್, ಸುರೇಶ್, ಮನು, ಸುಮ್ಮಂತ್ ಮುಂತಾದವರು ಭಾಗವಹಿಸಿದ್ದರು.

- Advertisement -

Latest News

error: Content is protected !!