Tuesday, June 23, 2026
Homeಮನರಂಜನೆಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ನಟ ,ನಿರ್ದೇಶಕ,ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತಕ್ಕೆ ಬಲಿ

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ನಟ ,ನಿರ್ದೇಶಕ,ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಬೆಂಗಳೂರು; ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ ಎದುರಾಗಿದೆ.  ನಟ ,ನಿರ್ದೇಶಕ,ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್  ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

- Advertisement -

Latest News

error: Content is protected !!