Friday, June 5, 2026
Homeತಾಜಾ ಸುದ್ದಿಕೆಜಿಎಫ್-2 ಸಿನಿಮಾದ ಖ್ಯಾತ ನಟ ವಿಧಿವಶ

ಕೆಜಿಎಫ್-2 ಸಿನಿಮಾದ ಖ್ಯಾತ ನಟ ವಿಧಿವಶ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ತಮ್ಮ ಅಭಿನಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ನಟ ಮೋಹನ್ ಜುನೇಜಾ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಹಾಸ್ಯನಟ ಮೋಹನ್ ನಿಧನರಾಗಿದ್ದಾರೆ. ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

- Advertisement -

Latest News

error: Content is protected !!