Wednesday, June 3, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಬಂಧನ

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಬಂಧನ

- Advertisement -
- Advertisement -

ಬೆಂಗಳೂರು; ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದೂವರೆ ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿತ್ತು. ಅದರಂತೆ ಬಂಧಿಸಿದ್ದಾರೆ.  ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್‌ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಹಾಸನದಲ್ಲಿ ಬಂಧಿಸಿದ್ದಾರೆ.

- Advertisement -

Latest News

error: Content is protected !!