Saturday, June 6, 2026
Homeತಾಜಾ ಸುದ್ದಿನಟಿ ರಾಗಿಣಿಗೆ ಸದ್ಯಕ್ಕಿಲ್ಲ ರಿಲೀಫ್: ಸೆ. 14 ರ ವರೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟಿ ರಾಗಿಣಿಗೆ ಸದ್ಯಕ್ಕಿಲ್ಲ ರಿಲೀಫ್: ಸೆ. 14 ರ ವರೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಸದ್ಯಕ್ಕೆ ರಿಲೀಫ್ ಇಲ್ಲ. ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ನಟಿ ರಾಗಿಣಿ ಪರ ವಕೀಲರು ಎನ್ ಡಿಪಿಎಸ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಸೆ.14ರವರೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಇನ್ನು ರಾಗಿಣಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಗಿದಿರುವ ಹಿನ್ನಲೆಯಲ್ಲಿ ರಾಗಿಣಿಯವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾ ಇಲ್ಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಂತರ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ರಾಗಿಣಿ ಹೆಸರು ಪ್ರಮುಖವಾಗಿ ಕೇಳಿ ಬಂದಿದ್ದು, ಎ2 ಆರೋಪಿಯಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!