Sunday, May 19, 2024
Homeಕರಾವಳಿಮಂಗಳೂರು: ಹರ್ ಘರ್ ಜಲ್ ಗ್ರಾಮವಾಗಿ ಸಂಗಬೆಟ್ಟು ಗ್ರಾಮ ಘೋಷಣೆ

ಮಂಗಳೂರು: ಹರ್ ಘರ್ ಜಲ್ ಗ್ರಾಮವಾಗಿ ಸಂಗಬೆಟ್ಟು ಗ್ರಾಮ ಘೋಷಣೆ

spot_img
- Advertisement -
- Advertisement -

ಮಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯತಿಯ ಸಂಗಬೆಟ್ಟು ಹಾಗೂ ಕರ್ಪೆ ಗ್ರಾಮ ವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ.

ಪ್ರತಿ ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ನೀಡುವ ಜಲಜೀವನ್ ಮಿಷನ್ ಆಶಯದಂತೆ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ.

ಸಂಗಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಹರ್ ಘರ್ ಜಲ್ ಗ್ರಾಮ ಘೋಷಣೆ ಕಾರ್ಯಕ್ರಮ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ವಿಮಲಾ ಮೋಹನ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಪದ್ಮ ನಾಯ್ಕ್ , ಪಂಚಾಯತ್ ಕಾರ್ಯದರ್ಶಿ ರೋಹಿಣಿ ಶೆಟ್ಟಿ , ಪಂಚಾಯತ್ ಸದಸ್ಯರು, ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಪು ಚಾಲಕರು, ಗ್ರಾಮಸ್ಥರು, ಫಲಾನುಭವಿಗಳ ಸಮ್ಮುಖದಲ್ಲಿ ಸಂಗಬೆಟ್ಟು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆ ಮಾಡಲಾಯಿತು.

- Advertisement -
spot_img

Latest News

error: Content is protected !!