Wednesday, June 3, 2026
Homeತಾಜಾ ಸುದ್ದಿಮಹಿಳಾ ಪ್ರಧಾನ ಕತೆಯ ಹಾರರ್ ಚಿತ್ರದಲ್ಲಿ ಸಂಗೀತಾ ಶೃಂಗೇರಿ

ಮಹಿಳಾ ಪ್ರಧಾನ ಕತೆಯ ಹಾರರ್ ಚಿತ್ರದಲ್ಲಿ ಸಂಗೀತಾ ಶೃಂಗೇರಿ

- Advertisement -
- Advertisement -

ಬಿಗ್‌ ಬಾಸ್‌ ನಲ್ಲಿ ಸ್ಟ್ರಾಂಗ್‌ ಲೇಡಿ ಎಂದೇ ಹೆಸರುಮಾಡಿದ್ದ ಸಂಗೀತಾ ಶೃಂಗೇರಿಗೆ ಇದೀಗ ಹಾರರ್, ಥ್ರಿಲ್ಲರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಚಿತ್ರದಲ್ಲಿ ನಿಶ್ಚಿತ್‍ ಕೊರೋಡಿ ನಾಯಕನಾಗಿ ಅಭಿನಯಿಸುತ್ತಿದ್ದಾರಂತೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಸಂಗೀತಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಜಗನ್‍ ಅಲೋಷಿಯಸ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಎಸ್‍.ವಿ. ನಾರಾಯಣ ಈ ಚಿತ್ರದ ನಿರ್ಮಾಪಕರು.

ಇನ್ನೂ ಹೆಸರಿಡದ ಈ ಚಿತ್ರ ಬರೀ ಕನ್ನಡದಲ್ಲಷ್ಟೇ ಅಲ್ಲ, ತಮಿಳಿನಲ್ಲೂ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಈಗಾಗಲೇ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. 50 ದಿನಗಳ ಒಂದೇ ಹಂತದಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ.

- Advertisement -

Latest News

error: Content is protected !!