Saturday, June 6, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ನಶೆ ರಾಣಿಯರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಮತ್ತೆ 'ನ್ಯಾಯಾಂಗ ಬಂಧನ'ದ ಅವಧಿ ವಿಸ್ತರಣೆ

ಸ್ಯಾಂಡಲ್ ವುಡ್ ನಶೆ ರಾಣಿಯರಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಮತ್ತೆ ‘ನ್ಯಾಯಾಂಗ ಬಂಧನ’ದ ಅವಧಿ ವಿಸ್ತರಣೆ

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಮಾಫಿಯಾ ಜೊತೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ರಾಗಿಣಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 23ರವರೆಗೆ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 23ರವರೆಗೆ ಡ್ರಗ್ಗಿಣಿಯರಿಗೆ ಜೈಲೇ ಗತಿಯಾದಂತೆ ಆಗಿದೆ.

ಈ ನಡುವೆ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ನಲ್ಲಿ ಜಾಮೀನು ಸಿಗದೇ ಇದ್ದ ಕಾರಣ ರಾಗಿಣಿ ಹಾಗೂ ಸಂಜನಾ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!