Thursday, June 25, 2026
Homeತಾಜಾ ಸುದ್ದಿಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ-ಹೈಕೋರ್ಟ್​ಗೆ ವರದಿ ಸಲ್ಲಿಸಿದ ವೈದ್ಯರು!

ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ-ಹೈಕೋರ್ಟ್​ಗೆ ವರದಿ ಸಲ್ಲಿಸಿದ ವೈದ್ಯರು!

- Advertisement -
- Advertisement -

ಬೆಂಗಳೂರು:ನಟಿ ಸಂಜನಾ ಗಲ್ರಾನಿ ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲುಪಾಲಾಗಿ ಜೈಲಿನಲ್ಲಿರುವಾಗಲೇ ಈಕೆಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈಕೆಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಈ ಕಾರಣಕ್ಕಾಗಿ ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯಾಗಿದೆ.

ತನಗೆ ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿದ್ದು, ಚಳಿಗಾಲದಲ್ಲಿ ಮತ್ತಷ್ಟು ಉಲ್ಬಣಿಸುತ್ತದೆ. ಹಿಂದೊಮ್ಮೆ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದೆ. ಹೀಗಾಗಿ, ಅಗತ್ಯ ಚಿಕಿತ್ಸೆ ಪಡೆಯಲು ಪ್ರಕರಣದಲ್ಲಿ ಜಾಮೀನು ನೀಡಬೇಕು ಎಂದು ಕೋರಿ ನಟಿ ಸಂಜನಾ ಅರ್ಜಿ ಸಲ್ಲಿಸಿದ್ದಾರೆ.

ಆದರೆ ವಿಚಾರಣೆಯಲ್ಲಿ ವೈದ್ಯಕೀಯ ವರದಿಯಲ್ಲಿ ಸದ್ಯಕ್ಕೆ ಔಷಧಿಯಲ್ಲೇ ಚಿಕಿತ್ಸೆ ಮುಂದುವರಿಯಬಹುದು. ಅಗತ್ಯ ಬಿದ್ದರೆ ಮಾತ್ರ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ವಿಷಯದಿಂದಾಗಿ ವಿಚಾರಣೆ ಮುಂದುವರಿದಿದೆ.ಇಂದು ವಿಚಾರಣೆ ಮುಂದುವರಿದಿದೆ.

- Advertisement -

Latest News

error: Content is protected !!