- Advertisement -
![]()
- Advertisement -
ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ NCP ನಾಯಕ ಶರದ್ ಪವಾರ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಸಂಜೆ ಭೇಟಿಯಾಗಿ ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಶರದ್ ಪವಾರ್ ಮತ್ತು ಸಿಎಂ ಉದ್ಧವ್ ಠಾಕ್ರೆ ಅವರು ಸೋಮವಾರ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾಗಿದ್ದಾರೆ. ಇದೊಂದು ಸೌಹಾರ್ದದ ಭೇಟಿಯಾಗಿದ್ದು ,ಇಬ್ಬರು ನಾಯಕರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಯಾರಾದರೂ ಸರ್ಕಾರದ ಸ್ಥಿರತೆಯ ಬಗ್ಗೆ ಸುದ್ದಿ ಹರಡುತ್ತಿದ್ದರೆ, ಅದು ಅವರ ಹೊಟ್ಟೆಕಿಚ್ಚು ಎಂದು ಪರಿಗಣಿಸಲಾಗುತ್ತದೆ. ಸರ್ಕಾರ ಸ್ಥಿರವಾಗಿದೆ. ಯಾರೂ ಚಿಂತಿಸಬೇಡಿ’ ಎಂದು ಸಂಜಯ್ ರಾವತ್ ಎಂದು ಟ್ವೀಟ್ ಮಾಡಿದ್ದಾರೆ.
- Advertisement -


