Sunday, May 5, 2024
Homeಕರಾವಳಿಮಹಿಳೆಯೊಬ್ಬರ  ಜೊತೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರದ್ದು ಎನ್ನಲಾದ ಫೋಟೋ ವೈರಲ್; ರಾಜ್ಯ ರಾಜಕೀಯದಲ್ಲಿ...

ಮಹಿಳೆಯೊಬ್ಬರ  ಜೊತೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರದ್ದು ಎನ್ನಲಾದ ಫೋಟೋ ವೈರಲ್; ರಾಜ್ಯ ರಾಜಕೀಯದಲ್ಲಿ ಸದ್ಯ ಸದ್ದು ಮಾಡುತ್ತಿದೆ ಫೋಟೋ

spot_img
- Advertisement -
- Advertisement -

ಪುತ್ತೂರು : ಮಹಿಳೆಯೊಬ್ಬರ ಜೊತೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರದ್ದು ಎನ್ನಲಾದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆ ಎ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲೂ ತಲ್ಲಣ ಮೂಡಿಸಿದೆ. ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೊಗಳು ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಘೋಷಣೆಯ ಮೊದಲು ಫೋಟೋ ವೈರಲ್ ಆಗಿರೋದು ಏನಾಗುತ್ತೆ ಅನ್ನೋ ಆತಂಕವನ್ನು ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಮೂಡಿಸಿದೆ.

- Advertisement -
spot_img

Latest News

error: Content is protected !!