Thursday, June 25, 2026
Homeಕರಾವಳಿಮಂಗಳೂರುಪುತ್ತೂರು: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣ; ಅಮಾನಾತಾಗಿದ್ದ ಕೊಯಿಲ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ...

ಪುತ್ತೂರು: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣ; ಅಮಾನಾತಾಗಿದ್ದ ಕೊಯಿಲ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಮತ್ತೆ ಕರ್ತವ್ಯಕ್ಕೆ ಹಾಜರು

- Advertisement -
- Advertisement -

ಪುತ್ತೂರು: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನಾತಾಗಿದ್ದ ಕೊಯಿಲ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹೊರಿಸಲಾದ ಆರೋಪಗಳಲ್ಲಿ ಹುರುಳಿಲ್ಲ ಎಂದು ಆದೇಶ ನೀಡಿದ್ದು, ಅಮಾನತು ಆದೇಶದಿಂದ ಸಂಜೀವ ಪೂಜಾರಿ ಮುಕ್ತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸಂಜೀವ ಪೂಜಾರಿ ಮತ್ತೆ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ನಡುವೆ ವಿಚಾರಣೆಯ ಕಾರಣಕ್ಕಾಗಿ ಕಳೆದ ಆಗಸ್ಟ್ ತಿಂಗಳಿನಿಂದ ಸಂಜೀವ ಪೂಜಾರಿಯವರ ಸಂಬಳವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡದೆ ಬಾಕಿ ಉಳಿಸಿದ್ದು, ತಕ್ಷಣವೇ ಸಂಬಳ ಬಿಡುಗಡೆ ಮಾಡಬೇಕೆಂದು ಸಂಜೀವ ಪೂಜಾರಿ ಆಗ್ರಹಿಸಿದ್ದಾರೆ

 

- Advertisement -

Latest News

error: Content is protected !!