Friday, June 5, 2026
Homeಕರಾವಳಿಮಂಗಳೂರುಸುಳ್ಯ; ಅವಹೇಳನಕಾರಿ ಹೇಳಿಕೆ ಪ್ರಕರಣ; ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಸುಳ್ಯ; ಅವಹೇಳನಕಾರಿ ಹೇಳಿಕೆ ಪ್ರಕರಣ; ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

- Advertisement -
- Advertisement -

ಸುಳ್ಯ; ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಅರೆಸ್ಟ್  ಮಾಡಲಾಗಿದೆ.

 ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿದ ಬಗ್ಗೆ ಸಂಜೀವ ಪೂಜಾರಿ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಬೆಳ್ಳಾರೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇನ್ನು ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಅದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!