Friday, June 5, 2026
Homeಕರಾವಳಿಮಂಗಳೂರುಸುಳ್ಯ; ಅವಹೇಳನಕಾರಿ ಹೇಳಿಕೆ ಪ್ರಕರಣ; ಅರೆಸ್ಟ್ ಆಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಗೆ ಜಾಮೀನು ಮಂಜೂರು

ಸುಳ್ಯ; ಅವಹೇಳನಕಾರಿ ಹೇಳಿಕೆ ಪ್ರಕರಣ; ಅರೆಸ್ಟ್ ಆಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಗೆ ಜಾಮೀನು ಮಂಜೂರು

- Advertisement -
- Advertisement -

ಸುಳ್ಯ; ಬಿಲ್ಲವ ಸಮಾಜ ಹೆಣ್ಣುಮಕ್ಕಳು, ಭಜನೆ ಮಾಡುವ ಹೆಣ್ಣು ಮಕ್ಕಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬೆಳ್ಳಾರೆ ಪೊಲೀಸರಿಂದ ಅರೆಸ್ಟ್ ಆಗಿದ್ದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಬಂಧನಕ್ಕೊಳಗಾಗಿದ್ದ ಸಂಜೀವ ಪೂಜಾರಿ ಅವರನ್ನು ಬೆಳ್ಳಾರೆ  ಪೊಲೀಸರು ಸುಳ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇನ್ನು ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಅದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸಿದ್ದರು

- Advertisement -

Latest News

error: Content is protected !!