Monday, June 8, 2026
Homeಕರಾವಳಿವಿಟ್ಲದಲ್ಲಿ ಅನ್ಯಕೋಮಿನ ಯುವಕನಿಂದ ಬಾಲಕಿ ಆತ್ಮಹತ್ಯೆ ಪ್ರಕರಣ: ಮೃತ ಬಾಲಕಿಯ ಮನೆಗೆ ಶಾಸಕ ಸಂಜೀವ...

ವಿಟ್ಲದಲ್ಲಿ ಅನ್ಯಕೋಮಿನ ಯುವಕನಿಂದ ಬಾಲಕಿ ಆತ್ಮಹತ್ಯೆ ಪ್ರಕರಣ: ಮೃತ ಬಾಲಕಿಯ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ

- Advertisement -
- Advertisement -

ವಿಟ್ಲ:  ಇಲ್ಲಿನ ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಅನ್ಯಕೋಮಿನ ಯುವಕನ ಕುಮ್ಮಕ್ಕಿನಿಂದ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿಯ ನಿವಾಸಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕರು ಬಡ ಕುಟಂಬದ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ  ಮುಸ್ಲಿಂ ಸಮಾಜದ ಕೆಲವರು ಅವರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಕರಣದ ಆರೋಪಿ ಸಾಹುಲ್ ಹಮೀದ್ ಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕಾಗಿದೆ ಎಂದರು.

ಇನ್ನು ನೊಂದ ಕುಟುಂಬಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಕರೋಪಾಡಿ ಗ್ರಾಮ ಪಂಚಾಯತ್ ನವರು ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದು, ನಾನು ಅವರ ಜೊತೆ ಕೈಜೋಡಿಸಲು ಸಿದ್ಧ ಎಂದು ತಿಳಿಸಿದ್ರು.

- Advertisement -

Latest News

error: Content is protected !!