- Advertisement -
![]()
- Advertisement -
ಉಡುಪಿ: ಶಂಕರನಾರಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಓರ್ವರಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಅವರು ವಾಸಿಸುತ್ತಿದ್ದ ಕೋಟತಟ್ಟು ಗ್ರಾಮ ಪಂಚಾಯತ್ ಕಚೇರಿ ಸಮೀಪದ ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯವರ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ. ಅಲ್ಲದೇ ಮಹಿಳೆ ವಾಸವಿದ್ದ ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂಧಿಗಳು ಸ್ಯಾನಿಟೈಸ್ ಮಾಡಿದ್ದಾರೆ.
ಜಿಲ್ಲೆಯಲ್ಲಿ ಈ ಮೊದಲು ಸೋಂಕು ದೃಢವಾಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
- Advertisement -


