Saturday, June 6, 2026
Homeತಾಜಾ ಸುದ್ದಿಮಂಗಳೂರು: ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಖಂಡನೆ: ಮುಖ್ಯಮಂತ್ರಿ ಇದ್ದ ಹೋಟೇಲ್‌ಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಮಂಗಳೂರು: ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಖಂಡನೆ: ಮುಖ್ಯಮಂತ್ರಿ ಇದ್ದ ಹೋಟೇಲ್‌ಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್‌ ಕಾರ್ಯಕರ್ತರು

- Advertisement -
- Advertisement -

ಮಂಗಳೂರು:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಯನ್ನು ಖಂಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದ ಮಂಗಳೂರು ನಗರದ ಖಾಸಗಿ ಹೊಟೇಲ್ ಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.

ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲ್ ಗೆ ಏಕಾಏಕಿ ನುಗ್ಗಲು ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಯತ್ನ ಮಾಡಲಾಯಿತು. ಇದೇ ವೇಳೆ ಸಿಎಂ ಬೊಮ್ಮಾಯಿ ಸಭೆ ನಡೆಸುತ್ತಿದ್ದರು. ಏಕಾಏಕಿ ನುಗ್ಗಲು ಯತ್ನಿಸಿದ್ದರಿಂದ ಪೊಲೀಸರು ತಬ್ಬಿಬ್ಬಾದ್ರು‌. ತಕ್ಷಣ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆಯಲು ಪ್ರಯತ್ನಿಸಿದ್ರು. ಆದ್ರೆ ಹೊಟೇಲ್ ಬಾಗಿಲಿನಿಂದ ರಸ್ತೆಗೆ ತಳ್ಳಿಕೊಂಡೇ ಬಂದ ಪೊಲೀಸರು ಬಳಿಕ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದರು..

- Advertisement -

Latest News

error: Content is protected !!