Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಗಳದ್ದಾ..?; ಸಿದ್ದರಾಮಯ್ಯ ಟ್ವೀಟ್!

ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಗಳದ್ದಾ..?; ಸಿದ್ದರಾಮಯ್ಯ ಟ್ವೀಟ್!

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದ್ದು, ದೇರಳಕಟ್ಟೆಯ ಖಾಸಗಿ ‌ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಗಳದ್ದಾ..? ಎಂದು ಪ್ರಶ್ನಿಸಿದ್ದಾರೆ.

ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಮಲ್ಪೆ ಬೀಚ್ ಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳು ಎಂಬ ಕಾರಣಕ್ಕೆ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಶರೀಫ್ ಕಾರಿನ ಮೇಲೆ ಆಗುತ್ತಿದ್ದ ದಾಳಿಯನ್ನು ತಡೆಯಲು ಯತ್ನಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಈ ಪ್ರಕರಣದ ಸಂಬಂಧ ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!