Sunday, June 7, 2026
Homeಕರಾವಳಿಬೆಂಗಳೂರಿನಲ್ಲಿ ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ‌ ಮತ್ತು ಯೋಗಿಕ್ ಸೈನ್ ಸೆಂಟರ್‌ ಉದ್ಘಾಟನೆ: ಕ್ಷೇಮವನ...

ಬೆಂಗಳೂರಿನಲ್ಲಿ ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ‌ ಮತ್ತು ಯೋಗಿಕ್ ಸೈನ್ ಸೆಂಟರ್‌ ಉದ್ಘಾಟನೆ: ಕ್ಷೇಮವನ ಉದ್ಘಾಟಿಸಲಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

- Advertisement -
- Advertisement -

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ‌ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಸೆಂಟರ್ ಇಂದು ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರದಲ್ಲಿ ನಿರ್ಮಾಣವಾಗಿರುವ ಕ್ಷೇಮವನ ವನ್ನು‌ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ.

ರಾಜ್ಯದ ‌ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಸುಧಾಕರ್, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್, ಸಂಸದ ಬಿ.ಎನ್. ಬಚ್ಚೇಗೌಡ, ಶಾಸಕ ಡಾ. ಶ್ರೀನಿವಾಸ ಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 11.30ಕ್ಕೆ ಲಕ್ನೋದಿಂದ ಬೆಂಗಳೂರಿಗೆ ಆಗಮಿಸಲಿರುವ ಯೋಗಿ ಆದಿತ್ಯನಾಥ್ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಕ್ಷೇಮವನದ ಪರಿಚಯ ‌ಮಾಡಿಕೊಡಲಿದ್ದಾರೆ. ನಂತರ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಷಣ ಮಾಡಲಿದ್ದಾರೆ.

- Advertisement -

Latest News

error: Content is protected !!