Thursday, June 4, 2026
Homeಕರಾವಳಿಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ‌ ಪದಗ್ರಹಣ

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ‌ ಪದಗ್ರಹಣ

- Advertisement -
- Advertisement -

ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಮಾಡಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅಧಿಕಾರ ಹಸ್ತಾಂತರಿಸಿದರು.

ಪದಗ್ರಹಣ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ‌.ವಿ. ಮತ್ತು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಭಾಗವಹಿಸಿದ್ದರು.

ಪದಗ್ರಹಣ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು. ನೂತನ ಜಿಲ್ಲಾಧ್ಯಕ್ಷರಾಗಿರುವ ಸತೀಶ್ ಕುಂಪಲ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರಲ್ಲದೇ, ವಿಧಾನಸಭೆ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

- Advertisement -

Latest News

error: Content is protected !!