Thursday, June 4, 2026
Homeಕರಾವಳಿಉಡುಪಿಉಡುಪಿ; ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ ನಿಧನ

ಉಡುಪಿ; ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ ನಿಧನ

- Advertisement -
- Advertisement -

ಉಡುಪಿ; ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ(52) ಹೃದಯಾಘಾತದಿಂದ ನಿಧನರಾಗಿದ್ದಾರೆ.

 ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರು ಹಾಗೂ ಖ್ಯಾತ ಇ.ಎನ್.ಟಿ. ತಜ್ಞರೂ ಆಗಿದ್ದ ಡಾ.ಸತೀಶ ಪೂಜಾರಿ ಸಾಸ್ತಾನ  ಇಂದು (ಜುಲೈ.11) ಗುರುವಾರ ಹೃದಯಾಘಾತದಿಂದ ಕೋಟದ ಮಣೂರಿನಲ್ಲಿರುವ ತಮ್ಮ ಮನೆಯಲ್ಲಿ ವಿಧಿವಶರಾಗಿದ್ದಾರೆ. ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಡಾ.ಸತೀಶ ಪೂಜಾರಿ ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು.ಇನ್ನು ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.

ಇಂದು ಸಂಜೆ 4.30 ರಿಂದ ಅವರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!