Wednesday, June 24, 2026
Homeತಾಜಾ ಸುದ್ದಿರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ನೇಮಕ

ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಅವರನ್ನು ನೇಮಕ ಮಾಡಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಎನ್. ಜಯರಾಂ ಸೇರಿದಂತೆ ಸುಮಾರು ಐವತ್ತಕ್ಕೂ ಹೆಚ್ಚು ಹೆಸರುಗಳ ಬಗ್ಗೆ ಕಳೆದ ವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.

ಇಂದು ಸತ್ಯವತಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಸತ್ಯವತಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಯಾಗಿ ಸೇವಾ ನಿವೃತ್ತಿ ಹೊಂದಿದ್ದರು.

ಇದುವರೆಗೂ ನಿವೃತ್ತ ಐಪಿಎಸ್ ಅಧಿಕಾರಿ ಎ.ಎಂ. ಪ್ರಸಾದ್ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿದ್ದರು.

- Advertisement -

Latest News

error: Content is protected !!