Saturday, June 6, 2026
Homeಕರಾವಳಿಬಂಟ್ವಾಳ; ಯುವಕನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿಎಸೆದು ಹೋದ ಪ್ರಕರಣ:ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ...

ಬಂಟ್ವಾಳ; ಯುವಕನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿಎಸೆದು ಹೋದ ಪ್ರಕರಣ:ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ;ಯುವಕನನ್ನು ಕೊಲೆ ಮಾಡಿ ಮೂಡಿಗೆರೆಯ ದೇವರಮನೆ ಸಮೀಪ ಗುಡ್ಡದಲ್ಲಿ ಎಸೆದು ಹೋದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ನಾಲ್ವರು ಆರೋಪಿಗಳನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ 25 ವರ್ಷದ ದಾವೂದ್ ಅಮೀರ್, 23 ವರ್ಷದ ಅಬ್ದುಲ್ ರಹೀಜ್, ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ 23 ವರ್ಷದ ಆಫ್ರಿದಿ, 20 ವರ್ಷದ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿಗಳು.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು  ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

- Advertisement -

Latest News

error: Content is protected !!