Saturday, October 17, 2026
Homeಕರಾವಳಿಮಂಗಳೂರಿನಲ್ಲಿ ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ಪೋಟೋ ಬಳಸಿ ಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ಅಳವಡಿಕೆ

ಮಂಗಳೂರಿನಲ್ಲಿ ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ಪೋಟೋ ಬಳಸಿ ಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ಅಳವಡಿಕೆ

- Advertisement -
- Advertisement -

ಮಂಗಳೂರು: ಮಂಗಳೂರು ನಗರದಲ್ಲಿ ವೀರ ಸಾವರ್ಕರ್ ಫೋಟೋ ಜೊತೆಗೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಕೂಡಾ ಕಾಣಿಸಿಕೊಂಡಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರುವ ಫ್ಲೆಕ್ಸ್ ಗಳಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಕಾಣಿಸಿಕೊಂಡಿದೆ. ಹಿಂದೂ ಮಹಾಸಭಾ ಹೆಸರಿನಲ್ಲಿ ಮಂಗಳೂರಿನ ಹಲವು ಕಡೆ ಫ್ಲೆಕ್ಸ್ ಅಳವಡಿಸಲಾಗಿದ್ದು ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಅಳವಡಿಸಲಾಗಿದೆ.

ಫ್ಲೆಕ್ಸ್ ಗಳಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥೂರಾಮ್ ಗೋಡ್ಸೆ ಫೋಟೋ ಕೂಡಾ ಬಳಸಲ್ಪಟ್ಟಿದೆ.

- Advertisement -

Latest News

error: Content is protected !!