Monday, May 13, 2024
Homeತಾಜಾ ಸುದ್ದಿಮಂಗಳೂರು: ಸಾವರ್ಕರ್ ಫೋಟೋ ವಿಚಾರ: ವಿದ್ಯಾರ್ಥಿ ಗುಂಪುಗಳ ನಡುವೆ ಪರಸ್ಪರ ಹಲ್ಲೆ: ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ...

ಮಂಗಳೂರು: ಸಾವರ್ಕರ್ ಫೋಟೋ ವಿಚಾರ: ವಿದ್ಯಾರ್ಥಿ ಗುಂಪುಗಳ ನಡುವೆ ಪರಸ್ಪರ ಹಲ್ಲೆ: ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಮಂಗಳೂರು: ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.

ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಲಭ್ಯ ಮಾಹಿತಿಯಂತೆ ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದನ್ನು ಆಕ್ಷೇಪಿಸಿದ್ದಾರೆ. ಇಂದು ಈ ವಿಚಾರವಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲಪಿದೆ.

ಈ ವೇಳೆ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.

- Advertisement -
spot_img

Latest News

error: Content is protected !!