Monday, June 8, 2026
Homeಕರಾವಳಿಉಡುಪಿಎಸ್‌ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ;ಕಾರ್ಕಳದ ಎಸ್ ಸಿ, ಎಸ್ ಟಿ ಮುಖಂಡರಿಂದ...

ಎಸ್‌ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ;ಕಾರ್ಕಳದ ಎಸ್ ಸಿ, ಎಸ್ ಟಿ ಮುಖಂಡರಿಂದ ಸಿಎಂ ಬೊಮ್ಮಾಯಿ‌ಗೆ ಸನ್ಮಾನ

- Advertisement -
- Advertisement -

ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಸ್ಸಿ ಎಸ್ಟಿ ಸಮುದಾಯದ ಮುಖಂಡರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು.

ಕಾರ್ಕಳದಿಂದ ಬಂದಿದ್ದ ಸುಮಾರು ನೂರಕ್ಕೂ ಹೆಚ್ಚು ಎಸ್ ಸಿ, ಎಸ್ ಟಿ ಮುಖಂಡರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು‌.

ಸನ್ಮಾನ ಸ್ವೀಕರಿಸಿದ ಬಳಿಕ ಸಿಎಂ ಬೊಮ್ಮಾಯಿ‌ ಕಾರ್ಕಳದ ಎಸ್ ಸಿ, ಎಸ್ ಟಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!