Friday, June 5, 2026
Homeಕರಾವಳಿಮಂಗಳೂರುಕಡಬ; ತಡರಾತ್ರಿ ಕಾರು ಹಾಗೂ ಸ್ಕೂಟರ್ ಮಧ್ಯೆ ಅಪಘಾತ; ಬಾಲಕ ಸಾವು, ತಂದೆ ಹಾಗೂ ತಂಗಿಗೆ...

ಕಡಬ; ತಡರಾತ್ರಿ ಕಾರು ಹಾಗೂ ಸ್ಕೂಟರ್ ಮಧ್ಯೆ ಅಪಘಾತ; ಬಾಲಕ ಸಾವು, ತಂದೆ ಹಾಗೂ ತಂಗಿಗೆ ಗಂಭೀರ ಗಾಯ

- Advertisement -
- Advertisement -

ಕಡಬ; ತಡರಾತ್ರಿ ಕಾರು ಹಾಗೂ ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿ ಬಾಲಕನೊಬ್ಬ ಸಾವನ್ನಪ್ಪಿ ಆತನ ತಂದೆ ಹಾಗೂ ತಂಗಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಡಬದ ಕಳಾರ ಸಮೀಪ ನಡೆದಿದೆ.

ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿಗೆ ಗಂಭೀರ ಗಾಯವಾಗಿದೆ.ಸರಸ್ವತಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು  ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.  ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು ಮದ್ಯದ ಬಾಟಲಿ, ಸಿಗರೇಟ್ ಪ್ಯಾಕ್ ಗಳು ಕಾರಿನ ಸೀಟಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!