Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ

ಚಿಕ್ಕಮಗಳೂರು: ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ

- Advertisement -
- Advertisement -

ಚಿಕ್ಕಮಗಳೂರು: ದೇವರಮನೆ ಗುಡ್ಡದ ಪ್ರವಾಸಕ್ಕೆ ತೆರಳಿದ್ದ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ರಸ್ತೆಯ ಪಕ್ಕದಲ್ಲಿದ್ದ ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಪ್ರವಾಸದಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಬಸಿಲಿನಲ್ಲಿ 10 ವಿದ್ಯಾರ್ಥಿಗಳಿದ್ದರು ಎಂಬ ಮಾಹಿತಿ ಬಂದಿದ್ದು, ಐವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ನಡೆದ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!