- Advertisement -
![]()
- Advertisement -
ಮಂಗಳೂರು: ಸ್ಕೂಲ್ ಬಸ್ ನಿರ್ವಾಹಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರು ಬಳಿ ಇಂದು ಬೆಳಗ್ಗೆ ನಡೆದಿದೆ. ಕುತ್ತಾರು ಪದವು ನಿವಾಸಿ ಸಂತೋಷ್ (40) ಮೃತ ವ್ಯಕ್ತಿ.
ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸುತ್ತಿರುವಾಗಲೇ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸಂತೋಷ್ ಅವರನ್ನ ಪಡೀಲಿನ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಂತೋಷ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
- Advertisement -


