Wednesday, June 19, 2024
Homeಕರಾವಳಿಉಳ್ಳಾಲ: ಶಾಲಾ ಕಾಂಪೌಂಡ್ ಗೋಡೆ ಕುಸಿದು ಬಾಲಕಿ ಸಾವು

ಉಳ್ಳಾಲ: ಶಾಲಾ ಕಾಂಪೌಂಡ್ ಗೋಡೆ ಕುಸಿದು ಬಾಲಕಿ ಸಾವು

spot_img
- Advertisement -
- Advertisement -

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನಲ್ಲಿರುವ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ನ್ಯೂಪಡ್ಪು ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಕ್ ಮತ್ತು ಜಮೀಲಾ ಅವರ ಪುತ್ರಿ ಶಾಜಿಯಾ (7) ಮೃತ ಪಟ್ಟಿದ್ದು,
ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು.

ಶಾಲೆಯ ಗೇಟಿನಲ್ಲಿ ಬಾಲಕಿ ಆಟವಾಡುತ್ತಿರುವ ಸಂದರ್ಭದಲ್ಲಿ ಕಾಂಪೌಂಡ್ ಗೋಡೆ ಕುಸಿದು ಶಾಜಿಯಾ ಮೇಲೆ ಬಿದ್ದಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!