Wednesday, June 24, 2026
Homeಕರಾವಳಿಉಡುಪಿಕಾರ್ಕಳ : ಶಾಲಾ ಮಕ್ಕಳು ಟೂರ್ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತ; ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ : ಶಾಲಾ ಮಕ್ಕಳು ಟೂರ್ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತ; ವಿದ್ಯಾರ್ಥಿಗಳಿಗೆ ಗಾಯ

- Advertisement -
- Advertisement -

ಕಾರ್ಕಳ : : ಶಾಲಾ ಮಕ್ಕಳು ಟೂರ್ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತವಾಗಿ ಕಾರ್ಕಳ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. 

ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು ಮಂಗಳವಾರ ಕುದುರೆಮುಖ ಹಾಗೂ ಶೃಂಗೇರಿಗೆ ಪ್ರವಾಸ ಹೊರಟಿದ್ದರು.  ಬುಧವಾರ ಮಧ್ಯಾಹ್ನ ವಾಪಸಾಗುತ್ತಿದ್ದ ವೇಳೆ ಮಾಳದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಬಸ್‌ನಲ್ಲಿ 43 ಮಂದಿ ವಿದ್ಯಾರ್ಥಿಗಳು, ಐವರು ಶಿಕ್ಷಕರಿದ್ದು ಅವರ ಪೈಕಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

 

- Advertisement -

Latest News

error: Content is protected !!