Thursday, May 16, 2024
Homeಕರಾವಳಿಪಿಯು ತರಗತಿಗಳು ಆರಂಭಗೊಂಡ ಬಳಿಕ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲಾಗುವುದು;ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ

ಪಿಯು ತರಗತಿಗಳು ಆರಂಭಗೊಂಡ ಬಳಿಕ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲಾಗುವುದು;ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ

spot_img
- Advertisement -
- Advertisement -

ಮಂಗಳೂರು:ದ.ಕ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ , ಪಿಯು ತರಗತಿಗಳನ್ನು ಹಂತಹಂತವಾಗಿ ತೆರಯಲು ನಿರ್ಧರಿಸಲಾಗಿದ್ದು,ಶಾಲೆಗಳ ಆರಂಭದ ಕುರಿತು ಸದ್ಯಕ್ಕೆ ಯೋಜನೆ ಮಾಡಿಲ್ಲ. ಈ ನಿಟ್ಟಿನಲ್ಲಿ ಸೋಮವಾರ ಜನಪ್ರತಿನಿಧಿಗಳೊಂದಿಗೆ ಸಭೆಯೂ ನಡೆದಿದೆ, ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಪಿಯು ತರಗತಿಗಳಿಗೆ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಬರಮಾಡಿಕೊಳ್ಳಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ತಪಾಸಣ, ಕೋವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದರ ಜೊತೆಗೆ ಕೋವಿಡ್ ನಿಯಮ ಪಾಲನೆಗೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ.

ಪಾಸಿಟಿವ್ ಕಂಡುಬಂದರೂ ಅದನ್ನು ನಿಭಾಯಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು,ಸದ್ಯ 14 ಸಾವಿರ ಕೋವಿಡ್ ಟೆಸ್ಟ್ ಗಳಾಗುತ್ತಿರುವ ಪ್ರಮಾಣದಲ್ಲಿ ಇನ್ನಷ್ಟು ಹೆಚ್ಚು ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳ ಪೈಕಿ ಸುಮಾರು 900 ರಷ್ಟು ವಿದ್ಯಾರ್ಥಿಗಳು ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೂ ಬಳಿಕ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಕಾಲೇಜು ಆಡಳಿತ ಮಂಡಳಿ ಯಾವ ರೀತಿ ವ್ಯವಸ್ಥೆ ಮಾಡಿದೆ ಎಂದು ತಿಳಿದು ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದವರು ತಿಳಿಸಿದ

- Advertisement -
spot_img

Latest News

error: Content is protected !!