Thursday, July 16, 2026
Homeತಾಜಾ ಸುದ್ದಿಜುಲೈ 1 ರಿಂದ ಶಾಲೆಗಳು ಆರಂಭ, ಜೂನ್ 15 ರಿಂದ ದಾಖಲಾತಿ ಪ್ರಾರಂಭ : ...

ಜುಲೈ 1 ರಿಂದ ಶಾಲೆಗಳು ಆರಂಭ, ಜೂನ್ 15 ರಿಂದ ದಾಖಲಾತಿ ಪ್ರಾರಂಭ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

- Advertisement -
- Advertisement -

ಬೆಂಗಳೂರು: ಕೋವಿಡ್‌-19 ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ ಜುಲೈ 1ರಿಂದ ಶಾಲೆಗಳು ಆರಂಭಗೊಳ್ಳಲಿವೆ ಎಂದು ಘೋಷಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್, ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಜೂನ್‌ 15ರಿಂದ ದಾಖಲಾತಿ ಆರಂಭಗೊಳ್ಳಲಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕೋವಿಡ್‌ ಪರಿಸ್ಥಿತಿ ಗಮನಿಸಿ, ಆನ್‌ಲೈನ್‌ ಅಥವಾ ಭೌತಿಕ ತರಗತಿಗಳನ್ನು ನಡೆಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಪೋಷಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದ ವಿವಾದ ಹೈಕೋರ್ಟ್‌ ಮುಂದೆ ಇದೆ. ಅಲ್ಲಿ ಸರ್ಕಾರದ ಪರ ವಾದವನ್ನು ಮಂಡಿಸಲಾಗಿದೆ. ನ್ಯಾಯಾಲಯ ಶೀಘ್ರ ತೀರ್ಪು ನೀಡಿದಲ್ಲಿ ಎಲ್ಲಾ ಗೊಂದಲಗಳಿಗೆ ಉತ್ತರ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!