Thursday, June 4, 2026
Homeಕರಾವಳಿಉಡುಪಿಉಡುಪಿ; ಪಾದಾಚಾರಿಗೆ ಡಿಕ್ಕಿ ಹೊಡೆದ ಸ್ಕೂಟರ್, ಸವಾರ ಸಾವು

ಉಡುಪಿ; ಪಾದಾಚಾರಿಗೆ ಡಿಕ್ಕಿ ಹೊಡೆದ ಸ್ಕೂಟರ್, ಸವಾರ ಸಾವು

- Advertisement -
- Advertisement -

ಉಡುಪಿ: ಪಾದಾಚಾರಿಗೆ ಸ್ಕೂಟರ್ ಡಿಕ್ಕಿ ಹೊಡದು ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಾಪುವಿನ ಮೂಳೂರು ಬೊಬ್ಬರ್ಯ ದೈವಸ್ಥಾನ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮುಗಿಸಿ ನೆರೆಮನೆಯವರಾದ ಸುರೇಶ್ ಹಾಗೂ ಹರೀಶ್ ಸ್ಕೂಟರ್‌ನಲ್ಲಿ ಉಡುಪಿ ಕಡೆಯಿಂದ ಮೂಳೂರು ಕಡೆಗೆ ಬರುತ್ತಿದ್ದರು. ಸ್ಕೂಟರ್ ನ್ನು ಸುರೇಶ್ ವರು ಚಲಾಯಿಸುತ್ತಿದ್ದರು.  ಈ ವೇಳೆ ಸ್ಕೂಟರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಣ್ಣ ಎಂಬವರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಈರಣ್ಣ, ಹರೀಶ್ ಹಾಗೂ ಸುರೇಶ್ ಬಿದ್ದು ಗಾಯಗೊಂಡಿದ್ದಾರೆ. .‌

ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಶ್ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!