- Advertisement -
![]()
- Advertisement -
ಪುತ್ತೂರು ; ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಲ್ಲಿ ಗಂಭೀರ ಗಾಯಗೊಂಡಿದ್ದ ಸಹ ಸವಾರ ಅರ್ಯಾಪು ನೆಕ್ರಾಜೆ ನಿವಾಸಿ ಹಸೈನಾರ್ ಅವರ ಪುತ್ರ ಮಹಮ್ಮದ್ ಆಸೀರ್(17) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಮ್ಮದ್ ಆಸೀರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇನ್ನು ಅಪಘಾತವಾಗುತ್ತಿದ್ದಂತೆ ಅರಿಯಡ್ಕ ಗ್ರಾಮದ ಪನೆಕ್ಕಳ ಜಾರತ್ತಾರು ನಿವಾಸಿ ಆದಂ ಎಂಬವರ ಮಗ ಸಿನಾನ್ (18) ಸ್ಥಳದಲ್ಲೇ ಮೃತಪಟ್ಟಿದ್ದ.
- Advertisement -


