Thursday, June 4, 2026
Homeಕರಾವಳಿಮಂಗಳೂರು: ಸ್ಕೂಟರ್ - ಕಂಟೈನರ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ಸ್ಕೂಟರ್ – ಕಂಟೈನರ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಗುರುವಾರ ರಾತ್ರಿ ಮರೋಳಿಯಲ್ಲಿ ದ್ವಿಚಕ್ರ ವಾಹನವು ಕಂಟೈನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಕೂಟರ್ ಅನ್ನು ಅತಿವೇಗದಲ್ಲಿ ಚಲಾಯಿಸಿಕೊಂಡು ಬರುತ್ತಿದ್ದಾಗ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಎರಡೂ ವಾಹನಗಳು ಬಿಕರ್ನಕಟ್ಟೆ ಕಡೆಯಿಂದ ಪಡೀಲ್ ಕಡೆಗೆ ತೆರಳುತ್ತಿದ್ದಾಗ ಮರೋಳಿಯಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!