ಬಂಟ್ವಾಳ; ಅಂಬ್ಯುಲೆನ್ಸಿಗೆ ಅಡ್ಡಿ ಪಡಿಸಿ ಬಂಧನಕ್ಕೊಳಗಾಗಿದ್ದ ಸ್ಕೂಟರ್ ಸವಾರ ಪುತ್ತೂರಿನ ಬೆಟ್ಟಂಪಾಡಿ ನಿವಾಸಿ ಮಹಮ್ಮದ್ ಮನ್ಸೂರ್ (38) ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ದಿನಾಂಕ 14-11-2025 ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಆರೋಪಿ ಮನ್ಸೂರ್ ದಿನಾಂಕ 30.10.2025 ರಂದು ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರ ಮನ್ಸೂರ್ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ. ಈ ಹಿನ್ನಲೆ ಆತ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆತನನ್ನು ಬಂಧಿಸಲಾಗಿತ್ತು. ಇದೀಗ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


