- Advertisement -
- Advertisement -
ಉಡುಪಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತ ಸ್ಕೂಟರ್ ಸವಾರ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಕೂಟಿ ಸಮೇತ ಕೆಳಗೆ ಬಿದ್ದು ತೀವ್ರ ಗಾಯಗೊಂಡು ನರಳಾಡುತ್ತಿದ್ದ ಪ್ರತೀಶ್ ಮತ್ತು ನಿಹಾಲ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಪ್ರತೀಶ್ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -