Wednesday, June 24, 2026
Homeಕರಾವಳಿರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರಕರಣ: ಸ್ಕೂಟರ್ ಸವಾರ ಸಾವು

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರಕರಣ: ಸ್ಕೂಟರ್ ಸವಾರ ಸಾವು

- Advertisement -
- Advertisement -

ಮಂಗಳೂರು: ಸ್ಕೂಟರ್ ಸವಾರನೋರ್ವ ಬೀರಿ ಸಮೀಪ ತಲಪಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಹಾಗೂ ಸ್ಕೂಟರ್ ಗೆ ನಡುವೆ ಢಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:  ಮುಹಮ್ಮದ್ ಮಹಾಝ್ ಅವರು ಮಂಗಳೂರಿನಲ್ಲಿ ಜನವರಿ 5ರಂದು ರಾತ್ರಿ ಕ್ಯಾಟರಿಂಗ್ ಕೆಲಸ ಮುಗಿಸಿ ತಮ್ಮ ಸ್ಕೂಟರ್‌ನಲ್ಲಿ ಊರಿಗೆ ಮರಳುತ್ತಿದ್ದರು. ಬೀರಿ ಸಮೀಪ ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಇವರ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ.

ಮಹಾಝ್ ಅವರು ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟಿದ್ದು, ನಂತರದಲ್ಲಿ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!