Monday, June 8, 2026
Homeಕರಾವಳಿಕಾಸರಗೋಡುನಿಯಂತ್ರಣ ಕಳೆದುಕೊಂಡು ಸ್ಕೂಟರ್ ಪಲ್ಟಿ : ಹತ್ತನೇ ತರಗತಿ ವಿದ್ಯಾರ್ಥಿ ಸಾವು

ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಪಲ್ಟಿ : ಹತ್ತನೇ ತರಗತಿ ವಿದ್ಯಾರ್ಥಿ ಸಾವು

- Advertisement -
- Advertisement -

ಕಾಸರಗೋಡು;ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಮಗುಚಿ ಬಿದ್ದ ಪರಿಣಾಮ ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ಹೊಸಂಗಡಿಯಲ್ಲಿ ನಡೆದಿದೆ.

ಉಪ್ಪಳ ಪೆರಿಂಗಡಿಯ ಮುಹಮ್ಮದ್ ಇಶಾಂ(15) ಮೃತಪಟ್ಟ ವಿದ್ಯಾರ್ಥಿ.ಈತ ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ  ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.

ಇಶಾಂ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಗೆಸೆಲ್ಪಟ್ಟು ಗಂಭೀರ ಗಾಯಗೊಂಡಿದ್ದ‌.ತಕ್ಷಣ ಇಶಾಂನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!