Friday, June 26, 2026
Homeಕರಾವಳಿಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಗೀತಾ ಗಾಯನ ಸ್ಪರ್ಧೆ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಗೀತಾ ಗಾಯನ ಸ್ಪರ್ಧೆ

- Advertisement -
- Advertisement -

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗೀತ ಗಾಯನ ಸ್ಪರ್ಧೆ ನಡೆಯಿತು. ಶಾಸಕರಾದ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿ,  ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ವಿಠ್ಠಲ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಹೇಮಲತಾ,  ಸಂಘದ ಕಾರ್ಯದರ್ಶಿ ಪ್ರಮೀಳಾ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 6 ಬುಲ್ ಬುಲ್ ,2 ಕಬ್ ವಿದ್ಯಾರ್ಥಿಗಳು,  ಹೀರಕ್ ಗರಿ ರಾಜ್ಯ ಪುರಸ್ಕೃತ , ರಾಷ್ಟ್ರ ಪುರಸ್ಕೃತ ಗೋಲ್ಡನ್ ಆ್ಯರೋ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.ಹಾಗೆಯೇ ವಿದ್ಯಾರ್ಥಿಗಳ ಏಳಿಗೆಗೆ ಕಾರಣವಾದ ಶಿಕ್ಷಕಿ ಪ್ರಮೀಳಾ ಇವರನ್ನು ಸನ್ಮಾನಿಸಿದರು.

SDM ಬೆಳ್ತಂಗಡಿಯ ಗೈಡ್ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಬೆಳ್ಳಿಯಪ್ಪ ಹಾಗೂ ಸಂತ ತೆರೇಸಾ ಬೆಳ್ತಂಗಡಿಯ ಸ್ಕೌಟ್ ಮಾಸ್ಟರ್ ವಿನ್ಸೆಂಟ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು. ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆ ಎಲ್ಲರನ್ನು ಸ್ವಾಗತಿಸಿದರು. ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ  ಕಾರ್ಯದರ್ಶಿಗಳಾದ ಪ್ರಮೀಳಾ ಅವರು ವಂದನಾರ್ಪಣೆಗೈದರು.  

- Advertisement -

Latest News

error: Content is protected !!